ಯೆಹೋಶುವ 14:3

ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;

ಸಂದರ್ಭದೊಂದಿಗೆ ಓದಿ · ಯೆಹೋಶುವ 14

1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್‌ ದೇಶದಲ್ಲಿ ಇಸ್ರಾಯೇಲ್‌ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.

2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.

3ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ;

4ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.

5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

ಯೆಹೋಶುವ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी