ವಿಮೋಚನಕಾಂಡ 29:20

ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.

19ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

20ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.

21ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.

22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी