ಯೋಹಾನನು 5:9

ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.

ಸಂದರ್ಭದೊಂದಿಗೆ ಓದಿ · ಯೋಹಾನನು 5

7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

8ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.

9ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.

10ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್‌ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.

11ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी