ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
7ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
8ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
9ಹೀಗೆ ದಕ್ಷಿಣದ ಅರಸನು ಅವನ ರಾಜ್ಯಕ್ಕೆ ಬಂದು ಮತ್ತೆ ಸ್ವಂತ ದೇಶಕ್ಕೆ ಹಿಂತಿರುಗಿ ಹೋಗುವನು.
10ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
11ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ