ಯೆರೆಮಿಯ 27:3

ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 27

1ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ

2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.

3ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.

4ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು--

5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.

ಯೆರೆಮಿಯ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी