ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
21ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ