ದಾನಿಯೇಲನು 6:26

ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 6

24ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.

25ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.

26ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

27ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.

28ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.

ದಾನಿಯೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी