೨ ಥೆಸಲೊನೀಕದವರಿಗೆ 1:2

ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 1

1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--

2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.

4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.

೨ ಥೆಸಲೊನೀಕದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी