ರೋಮಾಪುರದವರಿಗೆ 13:7

ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 13

5ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಿನ ನಿಮಿತ್ತವಾಗಿಯೂ (ಅವನಿಗೆ) ಅಧೀನ ನಾಗುವದು ಅವಶ್ಯ.

6ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.

7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

ರೋಮಾಪುರದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी