ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
35ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
37ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
38ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
39ಆಗ--ನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ