ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
2ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
4ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
6ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ