ಯೆರೆಮಿಯ 11:13

ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 11

11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,

12ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.

13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.

14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.

15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.

ಯೆರೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी