ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ