ಯೆಶಾಯ 45:2

ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಸಂದರ್ಭದೊಂದಿಗೆ ಓದಿ · ಯೆಶಾಯ 45

1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--

2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.

4ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.

ಯೆಶಾಯ 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी