೧ ಥೆಸಲೊನೀಕದವರಿಗೆ 2:12

ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 2

10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.

11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.

12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.

13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

೧ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी