ಯೋಹಾನನು 16:14

ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.

ಸಂದರ್ಭದೊಂದಿಗೆ ಓದಿ · ಯೋಹಾನನು 16

12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;

13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.

14ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.

15ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.

16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.

ಯೋಹಾನನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी