ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
4ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ