ವಿಮೋಚನಕಾಂಡ 31:16

ಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 31

14ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.

15ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.

16ಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.

17ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.

18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.

ವಿಮೋಚನಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी