ವಿಮೋಚನಕಾಂಡ 28:9

ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್‌ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 28

7ಅದರ ಎರಡೂ ಅಂಚುಗಳಲ್ಲಿ ಜೋಡಿಸುವದಕ್ಕೆ ಅದಕ್ಕೆ ಎರಡು ಹೆಗಲು ಭಾಗಗಳಿರಬೇಕು, ಅವು ಜೋಡಿಸಲ್ಪಡಬೇಕು.

8ಅದರ ಮೇಲಿರುವ ವಿಚಿತ್ರ ವಾದ ಎಫೋದಿನ ನಡುಕಟ್ಟು ಅದೇ ಕೆಲಸದ್ದಾಗಿ ಅಂದರೆ ಬಂಗಾರದಿಂದಲೂ ನೀಲಿ ಧೂಮ್ರ ರಕ್ತ ವರ್ಣದ ನೂಲಿನಿಂದಲೂ ನಯವಾದ ಹೊಸೆದ ನಾರಿನಿಂದಲೂ ಮಾಡಿದ್ದಾಗಿರಬೇಕು.

9ನೀನು ಎರಡು ಗೋಮೇಧಿಕ ಕಲ್ಲುಗಳನ್ನು ತೆಗೆದುಕೊಂಡು ಇಸ್ರಾ ಯೇಲ್‌ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.

10ಒಂದು ಕಲ್ಲಿನ ಮೇಲೆ ಆರು ಹೆಸರು ಗಳನ್ನೂ ಇನ್ನೊಂದು ಕಲ್ಲಿನ ಮೇಲೆ ಉಳಿದ ಆರು ಹೆಸರುಗಳನ್ನೂ ಅವರವರ ಜನನದ ಪ್ರಕಾರ ಕೆತ್ತಬೇಕು.

11ಕಲ್ಲು ಕೆತ್ತುವವರ ಕೆಲಸದಿಂದ ಮುದ್ರೆ ಕೆತ್ತುವ ಪ್ರಕಾರ ಆ ಎರಡು ಕಲ್ಲುಗಳನ್ನು ಇಸ್ರಾಯೇಲ್‌ ಮಕ್ಕಳ ಹೆಸರುಗಳಿಗನುಸಾರವಾಗಿ ಕೆತ್ತಿಸಿ ಅವುಗಳನ್ನು ಬಂಗಾ ರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.

ವಿಮೋಚನಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी