೨ ಸಮುವೇಲನು 19:28

ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.

27ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.

28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?

29ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.

30ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी