ನಹೂಮ 2:3

ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.

ಸಂದರ್ಭದೊಂದಿಗೆ ಓದಿ · ನಹೂಮ 2

1ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.

2ಕರ್ತನು ಯಾಕೋಬನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ತಿರುಗಿಸಿಬಿಟ್ಟಿ ದ್ದಾನೆ; ಬರಿದು ಮಾಡುವವರು ಅವರನ್ನು ಬರಿದು ಮಾಡಿ ಅವರ ದ್ರಾಕ್ಷೇ ಬಳ್ಳಿಗಳನ್ನು ಕೆಡಿಸಿದ್ದಾರೆ.

3ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್‌ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.

4ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.

5ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.

ನಹೂಮ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी