ಆಮೋಸ 7:10

ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.

ಸಂದರ್ಭದೊಂದಿಗೆ ಓದಿ · ಆಮೋಸ 7

8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.

9ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.

10ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.

11ಯಾರೊಬ್ಬಾಮನು ಕತ್ತಿಯಿಂದ ಸಾಯುವನೆಂದೂ ಇಸ್ರಾಯೇಲ್ಯರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವರೆಂದೂ ಆಮೋಸನು ಹೇಳಿದನು.

12ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.

ಆಮೋಸ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी