೧ ಅರಸುಗಳು 1:37

ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.

36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್‌: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.

37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.

38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.

39ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅಂದರು.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी