ಯೆಹೆಜ್ಕೇಲನು 12:14

ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.

13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.

14ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

15ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी