ರೂತಳು 2:16

ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.

ಸಂದರ್ಭದೊಂದಿಗೆ ಓದಿ · ರೂತಳು 2

14ಇದಲ್ಲದೆ ಬೋವಜನು ಅವಳಿಗೆ ಊಟದ ವೇಳೆಯಲ್ಲಿ ಹತ್ತಿರ ಬಂದು ರೊಟ್ಟಿಯ ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು ಅಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು ಇನ್ನೂ ಉಳಿಸಿಟ್ಟುಕೊಂಡಳು.

15ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವ ಜನು ತನ್ನ ಯುವಕರಿಗೆ ಆಜ್ಞಾಪಿಸಿ ಇವಳು ಕೊಯಿದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ನಿಂದಿಸಬೇಡಿರಿ;

16ಅವಳು ಹಕ್ಕಲಾದು ಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡು ಗಳಲ್ಲಿ ಕೆಲವು ಜಾರಬಿಡಿರಿ; ಅವಳನ್ನು ಗದರಿಸಬೇಡಿರಿ ಅಂದನು.

17ಹಾಗೆಯೇ ಅವಳು ಸಾಯಂಕಾಲದ ವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಒಂದು ಏಫದಷ್ಟು ಜವೆಗೋಧಿಯಾಗಿತ್ತು.

18ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.

ರೂತಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी