ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.
23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ