ಯೆಹೆಜ್ಕೇಲನು 12:10

ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 12

8ಬೆಳಗಿನ ಜಾವದಲ್ಲಿ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--

9ಮನುಷ್ಯ ಪುತ್ರನೇ, ಆ ಇಸ್ರಾಯೇಲಿನ ಮನೆತನದವರು ತಿರುಗಿ ಬೀಳುವ ಮನೆತನದವರಲ್ಲವೇ? ನೀನು ಏನು ಮಾಡುತ್ತೀ ಎಂದು ಹೇಳುತ್ತಾರಲ್ಲಾ.

10ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.

11ಹೀಗೆ ಹೇಳು--ನಾನು ನಿಮಗೆ ಗುರುತಾಗಿದ್ದೇನೆ. ನಾನು ಮಾಡಿದ ಹಾಗೆ ಅವರಿಗೆ ಮಾಡಲ್ಪಡುವದು, ಅವರು ಸಾಗಿ ಸೆರೆಗೆ ಹೋಗುವರು.

12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.

ಯೆಹೆಜ್ಕೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी