ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
8ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ