ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
4ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.
5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
6ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.
7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.
8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ