ಅಪೊಸ್ತಲರ ಕೃತ್ಯಗಳು 28:19

ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 28

17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ

18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.

19ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.

20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.

21ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.

ಅಪೊಸ್ತಲರ ಕೃತ್ಯಗಳು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी