ದಾನಿಯೇಲನು 7:25

ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

26ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.

27ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी