ಯೆಹೆಜ್ಕೇಲನು 36:31

ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 36

29ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.

30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.

31ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.

32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.

33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.

ಯೆಹೆಜ್ಕೇಲನು 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी