ಆದಿಕಾಂಡ 32:8

ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 32

6ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.

7ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.

8ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.

9ಇದಲ್ಲದೆ ಯಾಕೋಬನು ಹೇಳಿದ್ದೇ ನಂದರೆ--ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ನಿನ್ನ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು, ಆಗ ನಿನಗೆ ಒಳ್ಳೇದನ್ನು ಮಾಡುವೆನು ಎಂದು ನನಗೆ ಹೇಳಿದ ಕರ್ತನೇ,

10ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್‌ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.

ಆದಿಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी