ಯೆಶಾಯ 66:20

ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 66

18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.

20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.

21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.

22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

ಯೆಶಾಯ 66 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी