ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
32ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
33ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
34ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು.
35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ