ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
5ಆತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.
6ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ.
7ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ