ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ