೧ ಅರಸುಗಳು 2:11

ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.

10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.

11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.

12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.

13ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी