ಪ್ರಲಾಪಗಳು 4:19

ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 4

17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.

18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಅವರು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ; ನಮ್ಮ ಅಂತ್ಯವು ಸವಿಾಪಿಸಿತು, ನಮ್ಮ ದಿನಗಳು ತುಂಬಿದವು; ನಮ್ಮ ಅಂತ್ಯವು ಬಂದಿತು.

19ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು.

20ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

21ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಪ್ರಲಾಪಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी