ಅರಣ್ಯಕಾಂಡ 6:14

ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 6

12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.

13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.

14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.

15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.

16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.

ಅರಣ್ಯಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी