ಲೂಕನು 11:8

ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.

ಸಂದರ್ಭದೊಂದಿಗೆ ಓದಿ · ಲೂಕನು 11

6ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು

7ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.

8ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.

9ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.

10ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी