ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
11ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
12ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
15ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ