ಯೆರೆಮಿಯ 3:8

ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 3

6ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.

7ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.

8ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.

9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.

10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी