೨ ಪೂರ್ವಕಾಲವೃತ್ತಾಂತ 12:9

ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 12

7ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.

8ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.

9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.

10ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.

11ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.

೨ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी