ನೆಹೆಮಿಯ 9:6

ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.

5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.

6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.

7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್‌ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್‌ ಎಂದು ಹೆಸರಿಟ್ಟು

8ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी