ಮತ್ತಾಯನು 23:26

ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

24ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.

25ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.

26ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.

27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

28ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी