ಯೋಹಾನನು 13:6

ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.

ಸಂದರ್ಭದೊಂದಿಗೆ ಓದಿ · ಯೋಹಾನನು 13

4ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.

5ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.

6ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.

7ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.

8ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.

ಯೋಹಾನನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी