ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
15ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
16ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
17ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
18ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ