ವಿಮೋಚನಕಾಂಡ 4:23

(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 4

21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.

22ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.

23(ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.

24ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.

25ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.

ವಿಮೋಚನಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी