ಯಾಜಕಕಾಂಡ 26:7

ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.

6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.

7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.

8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.

9ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी